ಹಾವೇರಿ : ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ವಿದ್ಯಾರ್ಥಿನಿಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಶನಿವಾರ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಇದೀಗ ಶಿಕ್ಷಣ ಇಲಾಖೆ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿ ಎಂಬವರನ್ನು ಅಮಾನತುಗೊಳಿಸಿದೆ.
ಮಾಹಿತಿಗಳ ಪ್ರಕಾರ ಸುನೀತಾ ಡಿ.ಬಿ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪ ತೋರಿದ್ದರು. ಜೊತೆಗೆ ಆಡಳಿತ ಮಂಡಳಿ ಪರವಾಗಿ ಮಾತನಾಡಿದ್ದು, ಹಸ್ತಕ್ಷೇಪ ಇರುವುದು ಕಂಡುಬಂದಿತ್ತು. ತನಿಖೆ ಮಾಡಿದ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ ದಂಡಿನ ಅವರು ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ್ ಅಡಿಗರಿಂದ ಸೂಕ್ತಕ್ರಮಕ್ಕಾಗಿ ಶಿಪಾರಸ್ಸು ಮಾಡಿದ ಪತ್ರದನ್ವಯ ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಇದನ್ನೂ ಓದಿ : GBA ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ | ಕರೀಗೌಡ



















