ಹುಬ್ಬಳ್ಳಿ : ಈಜಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿಯ ಆನಂದನಗರದ ಗೋಡ್ಕೆ ಪ್ಲಾಟ್ ನಿವಾಸಿ ರಿಹಾನ್ ಮೃತ ದುರ್ದೈವಿ.
ರಿಹಾನ್ ಬಿಸಿಲಿನ ತಾಪದ ಹಿನ್ನೆಲೆ ಗ್ರಾಮದ ದೊಡ್ಡ ಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಈಜುವ ಭರದಲ್ಲಿ ಕೆರೆಯ ಆಳವಾದ ಭಾಗಕ್ಕೆ ಹೋಗಿದ್ದ ರಿಹಾನ್, ನೀರಿನ ಸೆಲೆಗೆ ಸಿಲುಕಿ ಮೇಲೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ದೌಡಯಿಸಿ ಶವವನ್ನು ಹೊರತೆಗೆದಿದ್ದಾರೆ. ಈ ಘಟನಾ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ



















