ಬೆಂಗಳೂರು: ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳು ಆತಂಕದಲ್ಲಿರುವ ಘಟನೆ ನಡೆದಿದೆ. ಈ ಘಟನೆ ಅಹೆಡ್ ಸೆರೆನಿಟಿ ಪಾರ್ಟ್‌ಮೆಂಟ್‌ನಲ್ಲಿ ನಡೆದಿದ್ದು, ಇದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದೆ.
ನಿರ್ಮಾಣ ಹಂತದಿಂದಲೇ ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಇದರ ಪರಿಣಾಮವಾಗಿ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಹೊರಗೆ ಸಂಚರಿಸಲು ಭಯದ ವಾತಾವರಣ ನಿರ್ಮಾಣವಾಗಿದೆ.
ಭಾನುವಾರ ಅಪಾರ್ಟ್‌ಮೆಂಟ್‌ನ ಮಹಿಳೆಯೊಬ್ಬರ ಮೇಲೆ ನಾಯಿಗಳು ತೀವ್ರವಾಗಿ ದಾಳಿ ಮಾಡಿದ್ದು, ದಾಳಿಯಿಂದ ಮಹಿಳೆಗೆ ಗಾಯಗಳಾಗಿವೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಾಯಿಗಳ ಆಕ್ರಮಣಕಾರಿ ವರ್ತನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆಕ್ರೋಶವನ್ನು ನಿವಾಸಿಗಳು ವ್ಯಕ್ತಪಡಿಸಿದ್ದಾರೆ. ಸಮಸ್ಯೆಗೆ ತಕ್ಷಣ ಪರಿಹಾರ ನೀಡುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಪೊಲೀಸರಿಗೆ ತಲೆನೋವಾಗಿದ್ದ ಅಂತಾರಾಜ್ಯ ವಾಹನ ಕಳ್ಳರು ಅರೆಸ್ಟ್..!



















