ಬೆಂಗಳೂರು : ನೀವು ಬೆಳಗಾವಿ ಜಿಲ್ಲೆಯವರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಕ್ಸ್ ಸರ್ವಿಸ್ ಮೆನ್ ಕಾಂಟ್ರಿಬ್ಯೂಟರಿ ಹೆಲ್ತ್ ಸ್ಕೀಮ್ (ECHS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ಎಕ್ಸ್ ಸರ್ವಿಸ್ ಮೆನ್ ಕಾಂಟ್ರಿಬ್ಯೂಟರಿ ಹೆಲ್ತ್ ಸ್ಕೀಮ್ (ECHS)
ಹುದ್ದೆಗಳ ಸಂಖ್ಯೆ: 58
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 20
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಅಥವಾ ಆನ್ ಲೈನ್
ಆಫೀಸರ್ ಇನ್ ಚಾರ್ಜ್, ರೇಡಿಯಾಲಜಿಸ್ಟ್, ಮೆಡಿಕಲ್ ಆಫೀಸರ್, ಡೆಂಟಲ್ ಆಫೀಸರ್, ನರ್ಸಿಂಗ್ ಅಸಿಸ್ಟಂಟ್, ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಎಂಬಿಬಿಎಸ್, ಎಂಡಿ, ಡಿಪ್ಲೋಮಾ, ಬಿಡಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.3 ಲಕ್ಷ ರೂಪಾಯಿವರೆಗೆ ಸಂಬಳ ನಿಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ echs.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?



















