ಬೆಂಗಳೂರು : ನೀವು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ 120 ಹುದ್ದೆಗಳ (BSNL Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದುವರೆಗೆ ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕವಾಗಿತ್ತು. ಈಗ ಇದನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
ಒಟ್ಟು ಹುದ್ದೆಗಳು: 120
ಹುದ್ದೆಗಳ ಹೆಸರು: ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 31
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಇಡಬ್ಲ್ಯೂಎಸ್, ಒಬಿಸಿಯವರಿಗೆ 2,500 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 1,250 ರೂಪಾಯಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ bsnl.co.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಐಪಿಎಲ್ 2026ಕ್ಕೆ ಸಜ್ಜಾಗುತ್ತಿರುವ ಎಂ.ಎಸ್ ಧೋನಿಗೆ ಸಂಕಷ್ಟ : ಸಂಚಾರಿ ನಿಯಮ ಉಲ್ಲಂಘನೆಗಾಗಿ ದಂಡ ಮತ್ತು ನೋಟಿಸ್ ಜಾರಿ



















