ಬೆಂಗಳೂರು : ಬೆಂಗಳೂರಲ್ಲಿ ಹೆಚ್ಚಾದ ರೋಡ್ ರೇಜ್ ಗಲಾಟೆ. ಮಂಗಳವಾರ ಬೆಳಿಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಓವರ್‌ಟೇಕ್ ಮಾಡುವ ವಿಚಾರವಾಗಿ ಟಿಟಿ ವಾಹನ ಚಾಲಕ ವೈದ್ಯಗೆ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಮಂಗಳವಾರ ಬೆಳಿಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಟಿಟಿ ವಾಹನದ ಚಾಲಕ ಹಾಗೂ ವೈದ್ಯನ ನಡುವೆ ವಾಗ್ವಾದ ಉಂಟಾಗಿ, ನಂತರ ಅದು ಗಲಾಟೆಯಾಗಿ ಮಾರ್ಪಟ್ಟಿದೆ. ಮಧ್ಯ ರಸ್ತೆಯಲ್ಲೇ ಟಿಟಿ ವಾಹನವನ್ನು ನಿಲ್ಲಿಸಿ ಚಾಲಕ ಉದ್ಧಟತನದಿಂದ ವರ್ತಿಸಿದ್ದಾನೆ ಎನ್ನಲಾಗಿದೆ.
ವೈದ್ಯನಿಗೆ “ಏನ್ ಮಾಡ್ತೀಯಾ ಮಾಡು” ಎಂದು ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ವೇಳೆ ಚಾಲಕ ಗೂಂಡಾಗಿರಿ ಪ್ರದರ್ಶಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಗಲಾಟೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!



















