ಶಿವಮೊಗ್ಗ: ನಗರದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಪುಂಡರ ಕೃತ್ಯಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿಯಾಗಿಎಉವ ಘಟನೆ ಬೆಳಕಿಗೆ ಬಂದಿದೆ.
ಶರಾವತಿ ನಗರದ ಹಂದಿ ಜೋಗಿ ಕ್ಯಾಂಪ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸುರೇಶ್ ಎಂಬುವರಿಗೆ ಸೇರಿದ ಕಾರನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದಷ್ಟೇ ಹೊಸ ಕಾರನ್ನು ಖರೀದಿಸಿದ್ದ ಸುರೇಶ್ ಅವರಿಗೆ ಈ ಘಟನೆ ಶಾಕ್ ನೀಡಿದೆ.
ಬೈಕ್‌ನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರಿನ ಗಾಜನ್ನು ಪುಡಿಪುಡಿ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ದೃಶ್ಯಾವಳಿಯಲ್ಲಿ ಇಬ್ಬರು ಆರೋಪಿಗಳು ಬೈಕ್ ನಿಲ್ಲಿಸಿ ಕಾರಿನ ಗಾಜನ್ನು ಒಡೆದು ಪರಾರಿಯಾಗುತ್ತಿರುವುದು ಕಂಡುಬಂದಿದೆ.
ಈ ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನೆಯಿಂದ ಸುರೇಶ್ ಅವರ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದು, ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ



















