ಹಾವೇರಿ: ಹಾವೇರಿಯಲ್ಲಿ ಹೃದಯವಿದ್ರಾವಕ ಅಗ್ನಿ ಅವಘಡವೊಂದು ಸಂಭವಿಸಿದೆ. ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹುಚ್ಚಪ್ಪ ಮುದ್ದಿ ಅವರಿಗೆ ಸೇರಿದ ಕುರಿಗಲಾಗಿದೆ. ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ 30ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಈ ಘಟನೆ ರಾಣೆಬೆನ್ನೂರು ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆಂಕಿ ಅವಘಡದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು



















