ಕೊಪ್ಪಳ : ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾದ ಬಳಿಕ ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆಯಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದೆ.
ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಂದ್ರಶೇಖರ ಎಂಬಾತನಿಗೆ ಐದಾರು ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ ಎನ್ಲಾಗಿದೆ.
ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಯುವಕರು ಚಂದ್ರಶೇಖರ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ, ನಮಗೆ ನೋವಾಗಿದೆ ಎಂದು ಚಂದ್ರಶೇಖರಗೆ ಬೈದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಚಂದ್ರಶೇಖರಗೆ ಬೆದರಿಕೆ ಕೂಡ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಈ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!



















