ಬೆಂಗಳೂರು : ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (HPCL Recruitment 2026) ಖಾಲಿ ಇರುವ 731 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಒಟ್ಟು ಹುದ್ದೆಗಳು: 731
ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 25
ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕೆಮಿಕಲ್ ವಿಭಾಗಗಳಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್, ಸಿವಿಲ್ ಎಂಜಿನಿಯರ್, ಮೆಕ್ಯಾನಿಕಲ್ ಎಂಜಿನಿಯರ್, ಆಫೀಸರ್, ಲೀಗಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 30 ಸಾವಿರ ರೂಪಾಯಿಯಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಡಿಗ್ರಿ, ಬಿಬಿಎಂ, ಬಿಎಸ್ಸಿ, ಎಲ್ ಎಲ್ ಬಿ, ಎಂಎಸ್ಸಿ, ಎಂಬಿಎ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಿನಾಯಿತಿ ನೀಡಲಾಗಿದೆ. ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ.
ಅರ್ಜಿ ಸಲ್ಲಿಸುವವರು hindustanpetroleum.com ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ : ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ



















