ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯವನ್ನು 7 ರನ್ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ಗೇರಿದೆ. ಈ ಮೂಲಕ ಮಾರ್ಚ್ 8ರ ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿಗಾಗಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ.
ರನ್ಗಳ ಮಳೆಯೇ ಹರಿದ ಎರಡನೇ ಸೆಮಿಫೈನಲ್ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ, ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್‌ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್ಗಳು, ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿತು. ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 246 ರನ್ ಗಳಿಸಲಷ್ಟೇ ಶಕ್ತವಾಯಿತು.
ಸಂಕ್ಷಿಪ್ತ ಸ್ಕೋರ್
ಭಾರತ 20 ಓವರ್ ಗಳಲ್ಲಿ 253/4, ಸಂಜು ಸ್ಯಾಮ್ಸನ್ 89(42), ಶಿವಂ ದುಬೆ 43(25), ಇಶಾನ್ ಕಿಶನ್ 39(18), ಹಾರ್ದಿಕ್ ಪಾಂಡ್ಯ 27(12), ತಿಲಕ್ ವರ್ಮಾ 21(7), ವಿಲ್ ಜಾಕ್ಸ್ 40ಕ್ಕೆ 2, ಆದಿಲ್ ರಶೀದ್ 41ಕ್ಕೆ 2.
ಇಂಗ್ಲೆಂಡ್ 20 ಓವರ್ ಗಳಲ್ಲಿ 246/7, ಜಾಕೋಬ್ ಬೆಥೆಲ್ 105(48), ವಿಲ್ ಜಾಕ್ಸ್ 35(20), ಜಾಸ್ ಬಟ್ಲರ್ 25(17), ಜೋಫ್ರಾ ಆರ್ಚರ್ ನಾಟೌಟ್ 19(4), ಹಾರ್ದಿಕ್ ಪಾಂಡ್ಯ 38ಕ್ಕೆ 2, ಜಸ್ಪ್ರೀತ್ ಬುಮ್ರಾ 33ಕ್ಕೆ 1
ಇದನ್ನೂ ಓದಿ: ಟಿ20 ವಿಶ್ವಕಪ್ ಸೆಮಿಫೈನಲ್ ಕದನ | ಟಾಸ್ ಗೆದ್ದ ಇಂಗ್ಲೆಂಡ್.. ಟೀಂ ಇಂಡಿಯಾ ಬ್ಯಾಟಿಂಗ್!



















