ಬೆಂಗಳೂರು: ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮುಂದಿನ ಮೂರು ವರ್ಷಗಳಿಗೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿಗೊಳಿಸಲಾಗುತ್ತದೆ. ಇದಕ್ಕಾಗಿ 100 ಕೋಟಿ ರೂಪಾಯಿ ವಿನಿಯೋಗಿಸಲಾಗುತ್ತದೆ. ಸಿರಿಧಾನ್ಯಗಳ ಉತ್ಪಾದನೆಗೆ ಉತ್ತೇಜನ ನೀಡಲು ಮಿಲೆಟ್ ಹಬ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ನಾಲ್ಕು ಆಧಾರ ಸ್ತಂಭಗಳಲ್ಲಿ ಬಜೆಟ್ ರೂಪಿಸಲಾಗಿದೆ. ರೈತರಿಗೆ ಗುಣಮಟ್ಟದ ಕೃಷಿ ಪರಿಕರ, ಧನಸಹಾಯ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆ ಸೌಲಭ್ಯ ವಿಸ್ತರಣೆ ಮಾಡುವುದು ನಮ್ಮ ಗುರಿಯಾಗಿದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ. ಇದಕ್ಕಾಗಿ 100 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಸಿರಿಧಾನ್ಯ ಉತ್ತೇಜನಕ್ಕಾಗಿ ಮಿಲೆಟ್ ಹಬ್ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಸರ್ವರ ಏಳಿಗೆಯೇ ಮುಖ್ಯ
ರಾಜ್ಯದ ಪ್ರತಿಯೊಬ್ಬರ ಕನಸು ನನಸು ಮಾಡಲು ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ನಾಡಿನ ಮಹಿಳೆಯರು, ರೈತರು, ಕೈಗಾರಿಕೋದ್ಯಮಿಗಳು, ದೀನ-ದಲಿತರು ಸೇರಿ ಸರ್ವರಿಗೂ ಅನುಕೂಲವಾಗುವ ದಿಸೆಯಲ್ಲಿ ಬಜೆಟ್ ಸಿದ್ಧಪಡಿಸಲಾಗಿದೆ. ಇದು ಪ್ರತಿಯೊಬ್ಬರಿಗೂ ಆಶಾದಾಯಕವಾದ ಬಜೆಟ್ ಎಂದು ಸಿದ್ದರಾಮಯ್ಯ ಹೇಳಿದರು.
ಗ್ಯಾರಂಟಿ ಯೋಜನೆಗಳ ಕುರಿತು ಬಣ್ಣನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಪ್ರಸ್ತಾಪಿಸಿದರು. “2023ರಲ್ಲಿ ನಾವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆವು. ಇದರಿಂದ ನಾಡಿನ ಸಮಸ್ತ ನಾಗರಿಕರಿಗೆ ಅನುಕೂಲವಾಗುತ್ತಿದೆ. ಅದರಲ್ಲೂ ಬಡವರ ಖರೀದಿಸುವ ಶಕ್ತಿಯನ್ನು ಹೆಚ್ಚಿಸಿದೆ” ಎಂದು ಹೇಳಿದರು.
ಬೆಂಗಳೂರು ಹೊರತಾಗಿಯೂ ಬೇರೆ ಜಿಲ್ಲೆಗಳ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದೆ. ಇದಕ್ಕೆ ಹೊಸ ಕೈಗಾರಿಕಾ ನೀತಿಯೂ ಪೂರಕವಾಗಿದೆ. ಹೊಸ ಉದ್ಯೋಗ ಸೃಷ್ಟಿ, ಯುವಕ-ಯುವತಿಯರಿಗೆ ತರಬೇತಿ, 50 ಉತ್ಪನ್ನಗಳಿಗೆ ಜಿಐ ಮಾನ್ಯತೆ ದೊರೆತಿದೆ. ಇದೆಲ್ಲವೂ ರಾಜ್ಯ ಸರ್ಕಾರದ ಸಾಧನೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ; ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು



















