ಹಾವೇರಿ : ಇದೊಂದು ಕಳಪೆ ಬಜೆಟ್, 25 ಸಾವಿರ ಕೋಟಿ ಹೊಸ ಸಾಲವನ್ನ ಮಾಡಿದ್ದಾರೆ. ದಿಕ್ಕುದಿಸೆ ಇಲ್ಲದ ಸಾಲದ, ಶೂಲಕ್ಕೆ ತೆಗೆದುಕೊಂಡು ಹೋಗುವ ಪ್ರಗತಿರಹಿತ ಬಜೆಟ್ ಇದು ಎಂದು ಮಾಜಿ ಸಿ.ಎಂ ಬಸವರಾಜ್ ಬೊಮ್ಮಾಯಿ ಅಸಮಧಾನ ಹೊರಹಾಕಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಮಾಡಿದ್ದು, ಈ ಬಗ್ಗೆ ಹಾವೇರಿಯಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ರಾಜ್ಯವನ್ನ 15 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಬಜೆಟ್‌ನಿಂದ ಬಹಳಷ್ಟು ನಿರಾಸೆಯಾಗಿದೆ. 17 ಭಾರಿ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯರಿಂದ ಈ ರೀತಿಯ ಬಜೆಟ್ ನಿರೀಕ್ಷೆ ಮಾಡಿರಲಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದೊಡ್ಡ ನೀರಾವರಿ, ಸಣ್ಣ ನೀರಾವರಿಗೆ ಸಣ್ಣ ಪ್ರಮಾಣ ಅನುಧಾನ ಇಟ್ಟಿದ್ದಾರೆ. ಅಪ್ಪರ್ ಕೃಷ್ಣಾ ಯೋಜನೆಗೆ ನಯಾ ಪೈಸೆ ಇಟ್ಟಿಲ್ಲ ನೀರಾವರಿ ಯೋಜನೆ ಸರಿಯಾದ ಅನುಧಾನ ನೀಡಿಲ್ಲ ಎಂದು ಹೇಳಿದ್ದಾರೆ.
ಇನ್ನು, ಇದೇ ವೇಳೆ ಒಳಮೀಸಲಾತಿ ಜಾರಿಗೆ ಮಾಡುವಂತೆ ದಾವಣಗೆರೆ ಬಂದ್‌ಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳಮೀಸಲಾತಿಗೆ ಸರ್ಕಾರವೇ ನೇರ ಕಾರಣವಾಗಿದೆ ಎಂದು ಆರೋಪಿಸಿ, ಅದರಲ್ಲಿ ಕೆಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ಬೆಳಗಾವಿ ಅಧಿವೇಶನದಲ್ಲಿ ಪಾಸ್ ಮಾಡಿದ್ದಾರೆ. ಆದರೆ ನ್ಯಾಯಾಲಯದ ಹೆಸರಿನಲ್ಲಿ ಈ ಸರ್ಕಾರ ಕುಂಟ್ಟುನೆಪ ಹೇಳಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ.
ಸರ್ಕಾರ ತಿದ್ದುಪಡಿ ಮಾಡಿ ಒಳಮೀಸಲಾತಿ ಜಾರಿಗೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಕೂಡಾ ಪ್ರತಿಭಟನೆ ಮಾಡುತ್ತಿವೆ ಎಂದು ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿಕಾರಿದ್ದಾರೆ.
ಇದನ್ನೂ ಓದಿ : ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!



















