ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಹೊಸಳ್ಳಿಯಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ಮುಂದುವರೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
‘ಬೀಟಮ್ಮ ಟೀಂ’ ಎಂದು ಕರೆಯಲಾಗುತ್ತಿರುವ ಕಾಡಾನೆಗಳ ಗುಂಪು ರಾತ್ರಿ ಹೊತ್ತಿನಲ್ಲಿ ತೋಟಗಳಲ್ಲಿ ಸಂಚರಿಸುತ್ತಿದ್ದು, ಬೇಲಿಗಳನ್ನು ದ್ವಂಸ ಮಾಡಿ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಾಟ ನಡೆಸುತ್ತಿದೆ. ಬೇಲಿ ಒಡೆದು ತೋಟದೊಳಗೆ ನುಗ್ಗುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ.
ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳು ಈ ಭಾಗದಲ್ಲಿ ಓಡಾಡುತ್ತಿದ್ದು, ಜನ ವಸತಿ ಪ್ರದೇಶಗಳಲ್ಲಿಯೂ ಬಿಂದಾಸ್ ಸಂಚರಿಸುತ್ತಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ತೋಟದ ಕಾರ್ಮಿಕರು ಎಚ್ಚರಿಕೆಯಿಂದಿರಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ. ಮೂಡಿಗೆರೆ ಅರಣ್ಯ ವಲಯ ವಿಭಾಗದ ಅಧಿಕಾರಿಗಳು ಕಾಡಾನೆಗಳನ್ನು ಕಾಡಿನತ್ತ ಓಡಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ



















