ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇನ್ ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಆ್ಯಂಡ್ ರಿ-ಜನರೇಟಿವ್ ಮೆಡಿಸಿನ್ ಸಂಸ್ಥೆಯಲ್ಲಿ (InStem Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇನ್ ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಆ್ಯಂಡ್ ರಿ-ಜನರೇಟಿವ್ ಮೆಡಿಸಿನ್ (InStem)
ಹುದ್ದೆಗಳ ಹೆಸರು: ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 07
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ instem.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!



















