ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ (RailTel Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳು: 02
ಹುದ್ದೆಗಳ ಹೆಸರು: ಅಸಿಸ್ಟಂಟ್, ಡೆಪ್ಯೂಟಿ ಮ್ಯಾನೇಜರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 24
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಅಧಿಸೂಚನೆಯಲ್ಲಿ ವಿದ್ಯಾರ್ಹತೆ ಕುರಿತು ಮಾಹಿತಿ ನೀಡಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ railtel.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Corporate Office/ RCIL, East Kidwai Nagar, New Delhi, 110023.
ಇದನ್ನೂ ಓದಿ : ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ



















