ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಕಪಿಲಾ ನದಿ ಪಾತ್ರದಲ್ಲಿದ್ದ ಬೃಹತ್ ಮರಗಳನ್ನು ದುಷ್ಕರ್ಮಿಗಳು ಅಕ್ರಮವಾಗಿ ಕಡಿದಿರುವ ಘಟನೆ ಬೆಳಕಿಗೆ ಬಂದಿದೆ.
ನಂಜನಗೂಡು ನಂಜುಂಡೇಶ್ವರ ದೇವಾಲಯದ ಹದಿನಾರು ಕಾಲು ಮಂಟಪದ ಬಳಿ ಬೆಳೆದಿದ್ದ ದೊಡ್ಡ ಮರಗಳನ್ನು ಅರಣ್ಯ ಇಲಾಖೆಯ ಯಾವುದೇ ಅನುಮತಿ ಇಲ್ಲದೆ ಕಡಿದು ಹಾಕಲಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಅಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದಂತೆ ಮರಗಳನ್ನು ಕಡಿದ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಕೃತ್ಯವನ್ನು ಸಚಿವ ಹೆಚ್.ಸಿ. ಮಹದೇವಪ್ಪ ಸಂಬಂಧಿಕ ಹೆಜ್ಜೆಗೆ ರಾಮಯ್ಯ ಅವರ ಕುಟುಂಬಸ್ಥರು ಮಾಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆಯ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಕಿಡ್ನ್ಯಾಪ್ ಕೇಸ್‌ಗೆ ಟ್ವಿಸ್ಟ್ | ಶವವಾಗಿ ಪತ್ತೆಯಾದ ಗೋಪಾಲ್.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ



















