ತುಮಕೂರು : ವೈದ್ಯೆಯೊಬ್ಬರು ಲಂಚ ಪಡೆಯವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿರುವ ಘಟನೆ ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಡಾ. ಸವಿತಾ ಲೋಕಾ ಬಲೆಗೆ ಬಿದ್ದ ನೇತ್ರಾ ಚಿಕಿತ್ಸಕಿ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇತ್ರಾ ಚಿಕಿತ್ಸಕಿಯಾಗಿರುವ ಡಾ ಸವಿತಾ, ಜಿಲ್ಲಾಸ್ಪತ್ರೆಯಲ್ಲಿ 6 ಸಾವಿರ ಹಣ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ತುಮಕೂರಿನ ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ಎಂಬುವವರ ತಾಯಿ ಕಣ್ಣಿಗೆ ಲೆನ್ಸ್ ಹಾಕಲು ಡಾ. ಸವಿತಾ 6 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ಅವಿನಾಶ್ ಲೋಕಾಯಕ್ತಕ್ಕೆ ದೂರು ನೀಡಿದ್ದರು.
ಇಂದು ಮಧ್ಯಾಹ್ನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮನೋಜ್ ಎಂಬಾತನ ಮೂಲಕ ಡಾ ಸವಿತಾ 6 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿವೈಎಸ್‌ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ಈ ಸಂಬಂಧ ಡಾ ಸವಿತಾ ಹಾಗೂ ಆಸ್ಪತ್ರೆ ಸಿಬ್ಬಂದಿ ಮನೋಜ್ ನನ್ನು ಲೋಕಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಂಪ್ಯೂಟರ್ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!



















