ತುಮಕೂರು : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸರ್ಕಾರದ ವಿರುದ್ದ ಹಸಿರು ಶಾಲಿನ ಚಾಟಿ ಬೀಸಿದ ರೈತರು, ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲೆ ಕುಳಿತು ಪ್ರತಿಭಟನೆ ನಡೆಸಿ, ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ರೈತರ ವಿವಿಧ ಬೇಡಿಕೆಗಳು:
• ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡಿರುವ ನಗರ ವ್ಯಾಪ್ತಿಯಲ್ಲಿನ ಭೂಮಿ ಮಂಜೂರು ಮಾಡುವಂತೆ ಒತ್ತಾಯ.
• ರೈತರಲ್ಲದವರಿಗೆ ಭೂಮಿ ಖರೀದಿ ಮಾಡುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಗೊಳಿಸುವಂತೆ ಆಗ್ರಹ.
• ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನ ಅನ್ಯ ಉದ್ದೇಶಗಳಿಗೆ ಭೂಸ್ವಾಧೀನ ಮಾಡದಂತೆ ಒತ್ತಾಯ.
• ಕೃಷಿ ಭೂಮಿಗಳಲ್ಲಿ ಗಣಿಗಾರಿಕೆಗಳಿಗೆ ಅನುಮತಿ ನೀಡಬಾರದು ಎಂದು ಒತ್ತಾಯಸಿ ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ : ಮಲ್ಲಿಕಾರ್ಜುನ್ ಮುತ್ಯಾಗೆ ಬಿಗ್ ಶಾಕ್.. ಪೋಕ್ಸೋ ಕೇಸಲ್ಲಿ ಜಾಮೀನು ಅರ್ಜಿ ವಜಾ!



















