ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (IDBI Bank Recruitment 2026) ಇಂಡಿಯಾದಲ್ಲಿ ಕಾಲಿ ಇರುವ 1,300 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI)
ಒಟ್ಟು ಹುದ್ದೆಗಳು: 1,300
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 19
200 ಅಸಿಸ್ಟಂಟ್ ಮ್ಯಾನೇಜರ್ ಹಾಗೂ 1,100 ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಇಗದೆ. ಕನಿಷ್ಠ 20 ವರ್ಷದವರಿಂದ 25 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.
ಆನ್ ಲೈನ್ ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಹಾಗೆಯೇ, ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 1,000 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು idbibank.in ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಜತೆಗೆ, ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ : ಕೋರ್ಟ್ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!



















