ಚಾಮರಾಜನಗರ : ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ನೋಡು ನೋಡುತ್ತಲೇ ಬೆಂಕಿ ಹೊತ್ತಿ ಉರಿದಿರುವ ಪರಿಣಾಮ ಕಂಪ್ಯೂಟರ್ ಹಾಗೂ ದಾಖಲಾತಿಗಳು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಆದರೆ ಸೂಕ್ತ ಕಾರಣದ ಬಗ್ಗೆ ತನಿಖೆ ಮುಂದುವರೆದಿದೆ. ಬೆಂಕಿ ಹೊತ್ತ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ತಕ್ಷಣ ದಾವಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಉಪೇಂದ್ರ ಭೇಟಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಅನಾಹುತದಿಂದ ಸ್ಥಳದಲ್ಲಿ ಆತಂಕದ ವಾತವರಣ ಸೃಷ್ಟಿಯಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಹಿರಿಯ ನಟ ದ್ವಾರಕೀಶ್ ಸೊಸೆ ವಿರುದ್ಧ ಚೀಟಿಂಗ್ ಕೇಸ್ | ಚೀಟಿ ಹೆಸ್ರಲ್ಲಿ ಲಕ್ಷ ಲಕ್ಷ ವಂಚನೆ ಆರೋಪ



















