ರಾಮನಗರ: ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆ ಸಮತಾ ಸೈನಿಕ ದಳ ಕಾರ್ಯಕರ್ತರು ರಾಮನಗರ ಜಿಲ್ಲಾಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ, ಅಗತ್ಯ ಔಷಧಿಗಳು ಲಭ್ಯವಿಲ್ಲ ಎಂದು ಆರೋಪಿಸಿದ್ದಾರೆ.
ವೈದ್ಯರು ಹಾಗೂ ಆಡಳಿತಾಧಿಕಾರಿಗಳ ವಿರುದ್ಧ ಕಿಡಿಕಾರಿದ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳಿಗೆ ತಕ್ಷಣವೇ ಸಮರ್ಪಕ ಚಿಕಿತ್ಸೆ ಮತ್ತು ಔಷಧಿಗಳ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ



















