ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನಲ್ಲೇ ಇರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ (ICMR Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಕನ್ಸಲ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ
ಹುದ್ದೆ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 18
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್, ಬಿಡಿಎಸ್, ಎಂಎಸ್ಸಿ, ಎಂಪಿಎಚ್, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 70 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ icmr.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕನ್ಸಲ್ಟಂಟ್ ಹುದ್ದೆಯ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ icmriburecruitment@gmail.com ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿಯಿಂದ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!



















