ಚಾಮರಾಜನಗರ: ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಪತಿ-ಪತ್ನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೇ ಬಡಾವಣೆಯಲ್ಲಿ ನಡೆದಿದೆ.
ಮನೆಯ ಅಡುಗೆಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡು ಮನೆ ತುಂಬಾ ವ್ಯಾಪಿಸಿದ ಪರಿಣಾಮ ಮನೆಯಲ್ಲಿದ್ದ ಪಾತ್ರೆಪಗಡೆ, ಸ್ಟವ್ ಹಾಗೂ ದವಸಧಾನ್ಯ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾಗಿವೆ.
ಈ ಅವಘಡದಲ್ಲಿ ಸಿ. ಪರಮೇಶ್ ಹಾಗೂ ಅವರ ಪತ್ನಿ ಮಂಜುಳಾ ಅವರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಸ್ಥಳೀಯರು ಹಾಗೂ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಕಾರು-ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ



















