ನವದೆಹಲಿ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ಕಂಬಳ ನಡೆಸುವ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕಂಬಳವನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಅರ್ಜಿಯನ್ನು ವಿಚಾರಣೆ ಮಾಡಿತ್ತು.
ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳು, “ರಾಜ್ಯದ ಇತರ ಭಾಗಗಳಲ್ಲಿ ಸಂಸ್ಕೃತಿಯನ್ನು ಪ್ರದರ್ಶಿಸಲು ಏನು ತಪ್ಪಿದೆ? ಜನರು ಸಹ ಪರಂಪರೆಯನ್ನು ಅನುಭವಿಸಬಹುದು. ಅದನ್ನು ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು?” ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕರ್ನಾಟಕದ ಇತರ ಭಾಗಗಳಲ್ಲಿ ‘ಕಂಬಳ’ವನ್ನು ನಡೆಸುವುದರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ : ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಜಾಡಿಸಿ ಒದ್ದ ಕುದುರೆ.. ವ್ಯಕ್ತಿ ಬಲಿ!



















