ಬಳ್ಳಾರಿ : ಬಳ್ಳಾರಿಯಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಹಿನ್ನಲೆ ವಿದ್ಯಾರ್ಥಿಗಳಿಂದ ಭಾರಿ ಹೈಡ್ರಾಮಾ ನಡೆದಿರುವ ಘಟನೆ ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದಿದೆ.
ಅರವಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳ ಮಧ್ಯೆ ನಿನ್ನೆ ಜಗಳ ನಡೆದಿದೆ. ಬಳಿಕ ಕಾಲೇಜಿನ ಹೆಚ್‌ಓಡಿ ಮತ್ತು ಪ್ರೊಫೆಸರ್‌ಗಳು ಅರವಿಂದ ಪೋಷಕರನ್ನು ಕರೆಸಿ, ಹೀಗೆ ಗಲಾಟೆ ಮಾಡುವ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಇರಿಸಿಕೊಳ್ಳಲಾಗುವುದಿಲ್ಲ. ಇದು ಕೊನೆಯ ಎಚ್ಚರಿಕೆ ನೀಡಿದ್ದಾರೆ.
ಇದರಿಂದ ಬೇಸತ್ತ ವಿದ್ಯಾರ್ಥಿ ಅರವಿಂದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ಬ್ರೂಸ್ ಪೇಟ್ ಪೋಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.
ಇದನ್ನೂ ಓದಿ : ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?



















