ಬೆಂಗಳೂರು : ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿನಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 53 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: 53
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಮಾರ್ಚ್ 16
1 ಪ್ರೊಫೆಸರ್, 14 ಅಸೋಸಿಯೇಟ್ ಪ್ರೊಫೆಸರ್, 10 ಅಸಿಸ್ಟಂಟ್ ಪ್ರೊಫೆಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಗರಿಷ್ಠ 67 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.53 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಬಿಎಸ್, ಡಿ ಎನ್ ಬಿ, ಡಿಎಂ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮೊದಲು http://esic.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Dean, ESIC Medical College PGIMSR & Model Hospital, Rajajinagar, Bangalore – 560 010
ಇದನ್ನೂ ಓದಿ : ಶಾಲಾ ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.. ಕಾರಣ ನಿಗೂಢ!



















