ಬೆಂಗಳೂರು : ಗಲ್ಫ್ ರಾಷ್ಟ್ರಗಳ ಯುದ್ಧದಿಂದಾಗಿ ದೇಶದ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಅದರಲ್ಲೂ ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯವೂ ರಾಜ್ಯದ ಜನ ಜೀವನದ ದಿಕ್ಕೇ ಬದಲಾಗುತ್ತಿದೆ. ಹೋಟೆಲ್ಗಳು ಬಂದ್ ಆಗುತ್ತಿವೆ. ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್ಪಿಜಿ ದಾಸ್ತಾನು ಕೊರತೆ ಇಲ್ಲ. ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು ಪ್ರಾರಂಭವಾಗಿದ್ದರಿಂದ ಹಲವಾರು ಹೋಟೆಲ್ಗಳು ಬಂದ್ ಆಗಿವೆ ಎಂದು ಹೇಳಲಾಗುತ್ತಿದೆ. ಗ್ಯಾಸ್ ಕೊರತೆಯಿಂದ ಪಿಜಿಯಲ್ಲೂ ಸಹ ಮೆನು ಬದಲಾವಣೆ ಮಾಡಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಬೆನ್ನಲ್ಲೇ ಡೊಮೆಸ್ಟಿಕ್ ಸಿಲಿಂಡರ್ಗಳ ಅಭಾವ ಉಂಟಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆ ಬೆಂಗಳೂರು ಡಿಸಿ ಜಗದೀಶ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ವದಂತಿಗೆ ಕಿವಿಕೊಡಬೇಡಿ :
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅನಿಲದ ಕೊರತೆ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಹಾಗೂ ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದಲ್ಲಿ ಸಹಾಯವಾಣಿ 9611404384 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!


















