ಬೆಂಗಳೂರು: ನೀವು ಚಿಕ್ಕಮಗಳೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (Chikkamagaluru District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ನೋಟರಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಚಿಕ್ಕಮಗಳೂರು
ಹುದ್ದೆಗಳ ಹೆಸರು: ನೋಟರಿ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25
ಚಿಕ್ಕಮಗಳೂರು ಜಿಲ್ಲೆ ಕಡೂರು ಕಂದಾಯ ತಾಲೂಕಿಗೆ ಹೆಚ್ಚುವರಿಯಾಗಿ ಸೃಷ್ಟಿಸಿರುವ ನೋಟರಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿದೆ. ಅಧಿಸೂಚನೆಯ ನಿಯಮಗಳಂತೆಯೇ ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ chikkamagaluru.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೋಟರಿ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಸಮೇತ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Office of the Principal District and Sessions Judge, Chikkamagaluru, 577101.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ



















