ಕೋಲಾರ : ಗ್ಯಾಸ್ ಕೊರತೆಯನ್ನು ಬಂಡವಾಳ ಮಾಡಿಕೊಂಡು ಅಕ್ರಮವಾಗಿ ಗ್ಯಾಸ್ ರೀ-ಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಅಂಡರ್ಸನ್ ಪೇಟೆಯ ಸಲ್ಡಾನ ಸರ್ಕಲ್‌ನಲ್ಲಿ ಈ ದಾಳಿ ನಡೆದಿದ್ದು, ರಾಜಾ ಸಾಬ್ ಎಂಬ ವ್ಯಕ್ತಿ ಅಕ್ರಮವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ರೀ-ಫಿಲ್ಲಿಂಗ್ ನಡೆಸುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ರೀ-ಫಿಲ್ಲಿಂಗ್‌ಗೆ ಬಳಸಲಾಗುತ್ತಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಟೋ ಗ್ಯಾಸ್ ಹಾಗೂ ಕಮರ್ಷಿಯಲ್ ಗ್ಯಾಸ್ ಕೊರತೆಯನ್ನು ಬಳಸಿಕೊಂಡು ಕೆಲ ಖಾಳಸಂತೆಕೋರರು ಅಕ್ರಮವಾಗಿ ಗ್ಯಾಸ್ ರೀ-ಫಿಲ್ಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಪ್ರದೇಶದಲ್ಲಿ ಈ ಹಿಂದೆ ಕೂಡ ಪೊಲೀಸರು ಹಲವು ಬಾರಿ ದಾಳಿ ನಡೆಸಿದ್ದರೂ, ಮತ್ತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಅಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!



















