ಮಂಗಳೂರು : ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟ್ನ ಗುಂಡ್ಯ ಸಮೀಪ ನಡೆದಿದೆ.
ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಮಂಗಳೂರಿನಿಂದ ಸಕಲೇಶಪುರದತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
ಮಾಹಿತಿಯಂತೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : IPL 2026 : ಸತತ ಎರಡನೇ ಬಾರಿ ಟ್ರೋಫಿ ಗೆಲ್ಲಲು ವಿರಾಟ್ ಕೊಹ್ಲಿ ಹಪಾಹಪಿ; ಇರ್ಫಾನ್ ಪಠಾಣ್



















