ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (KHPT Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 2 ಫೈನಾನ್ಸ್ ಆಫೀಸರ್ ಹಾಗೂ ಡಿಸ್ಟ್ರಿಕ್ಟ್ ಲೀಡ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಬೆಂಗಳೂರು ಹಾಗೂ ವಿಜಯಪುರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ಅರ್ಜಿ ಸಲ್ಲಿಕೆ ಕುರಿತ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್
ಒಟ್ಟು ಹುದ್ದೆ: 02
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 22
ಉದ್ಯೋಗ ಸ್ಥಳ: ಬೆಂಗಳೂರು, ವಿಜಯನಗರ
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳ ಪರಿಶೀಲನೆ, ಅಭ್ಯರ್ಥಿಗಳ ಕಾರ್ಯಾನುಭವ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ khpt.org ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಎಕ್ಸಿಮ್ ಬ್ಯಾಂಕಿನಲ್ಲಿ 6 ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















