ಬೀದರ್: ರಾಜ್ಯ ಹಾಗೂ ದೇಶದಲ್ಲಿರುವ ಈ ಗ್ಯಾಸ್ ಸಮಸ್ಯೆಗೆ ನೇರವಾಗಿ ಕೇಂದ್ರ ಸರ್ಕಾರ ಕಾರಣ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.
ಅಡುಗೆ ಸಿಲಿಂಡರ್ ಕೊರತೆ ವಿಚಾರವಾಗಿ ಬೀದರ್‌ನಲ್ಲಿ ಪ್ರತಿಕ್ರಿಯೆ ನೀಡಿದ ಈಶ್ವರ್ ಖಂಡ್ರೆ, ಸದ್ಯ ಅಡುಗೆ ಅನಿಲ ಗ್ಯಾಸ್ ಮತ್ತು ವಾಣಿಜ್ಯ ಸಿಲಿಂಡರ್ ಸಮಸ್ಯೆ ಇದ್ದು, ಇನ್ನು,8-10 ದಿನಗಳ ಕಾಲ ವಾಣಿಜ್ಯ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದು ತಿಳಿಸಿದ್ದಾರೆ.
ಸದ್ಯ ಬೀದರ್ ಜಿಲ್ಲೆಯಲ್ಲಿ ಅಡುಗೆ ಅನಿಲಕ್ಕೆ ಯಾವುದೇ ತೊಂದರೆಯಿಲ್ಲ. ಆದರೂ ಕೂಡಾ ನಾನು ಜಿಲ್ಲೆಯಲ್ಲಿರುವ ಗ್ಯಾಸ್ ಏಜೆನ್ಸಿಗಳೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿನಿತ್ಯ ಬೇಕಾಗುವ 6 ಸಾವಿರ ಸಿಲಿಂಡರ್ ಪೂರೈಸುವಂತೆ ಸೂಚನೆ ನೀಡಲಾಗಿದೆ ಹಾಗೂ ಕಾಳಸಂತೆಯಲ್ಲಿ ಮಾರಾಟಕ್ಕೆ ಪ್ರಯತ್ನಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!



















