ಮೈಸೂರು: ನವಜಾತ ಗಂಡು ಮಗುವಿನ ಶವ ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಳಿಗೇಶ್ವರಿ ದೇವಾಲಯದ ಸಮೀಪದ ನಾಲೆಯಲ್ಲಿ ಮಗುವಿನ ಶವ ಪತ್ತೆಯಾಗಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮಗು ಹುಟ್ಟಿದ ತಕ್ಷಣ ಯಾರೋ ಜನ್ಮ ನೀಡಿ ನಾಲೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನಾಲೆಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ಯಾರು ಬಿಸಾಡಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!



















