ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ನವಿಲುಗಳ ಕಳೇಬರ ಪತ್ತೆಯಾಗಿದೆ. ನವಿಲುಗಳಿಗೆ ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.
ನೆಲಮಂಗಲ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ : ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!


















