ಚಿಕ್ಕಬಳ್ಳಾಪುರ : ಹೆಚ್‌ಎನ್ ವ್ಯಾಲಿ (HN Valley) ನೀರು ತೃತೀಯ ಹಂತದ ಶುದ್ಧೀಕರಣಕ್ಕೆ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ಬಂದ್‌ಗೆ ಕರೆ ನೀಡಲಾಗಿದೆ. ಸಮಾಜ ಸೇವಕ ಸಂದೀಪ್ ಬಿ. ರೆಡ್ಡಿ ನೇತೃತ್ವದಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಬಂದ್‌ಗೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕ ರಿಂದ ಬೃಹತ್ ಬೆಂಬಲ ವ್ಯಕ್ತವಾಗಿದೆ.
ಬಂದ್ ಕರೆ ಹಿನ್ನೆಲೆ ಬೆಳ್ಳಂಬೆಳಗ್ಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಸಂದೀಪ್ ರೆಡ್ಡಿ ನೇತೃತ್ವದಲ್ಲಿ ನಗರದ ಬಿಬಿ ರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ. ಅಂಬೇಡ್ಕರ್ ವೃತ್ತದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಭಾಗಿಯಾಗಲಿದ್ದು, ಹೆಚ್.ಎನ್. ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಒತ್ತಾಯಿಸಲಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಆಟೋ ಚಾಲಕರ ಸಂಘ, ಕನ್ನಡಪರ ಸಂಘಟನೆಗಳ ಮುಖಂಡರು, ರೈತ ಸಂಘದ ಮುಖಂಡರು, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಹಲವಾರು ಸಂಘಟನೆಗಳು , ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬೆಂಬಲಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!



















