ಬೆಂಗಳೂರು : ನೀವೇನಾದರೂ ಯಾದಗಿರಿ ಜಿಲ್ಲೆಯವರಾ? ಯಾದಗಿರಿಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ (Yadgiri District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಹೀಗಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಯಾದಗಿರಿ
ಒಟ್ಟು ಹುದ್ದೆಗಳು: 14
ಹುದ್ದೆಗಳ ಹೆಸರು: ಪ್ರೊಸೆಸ್ ಸರ್ವರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 12
9 ಪ್ರೊಸೆಸ್ ಸರ್ವರ್ ಹಾಗೂ 5 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 61,300 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ yadgir.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
• ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
• ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
• ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
• ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು
ಇದನ್ನೂ ಓದಿ : ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!



















