ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ನಗರದ ಜೈನ್ ಕಾಲೇಜು ಮುಂಭಾಗ ಈ ಘಟನೆ ನಡೆದಿದ್ದು, ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದಿದ್ದ ಮೂರ್ನಾಲ್ಕು ಯುವಕರು ಒಬ್ಬ ವಿದ್ಯಾರ್ಥಿಯನ್ನು ಗುರಿಯಾಗಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೆ ಒಳಗಾದ ಯುವಕ ವಿಜಯ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಲಾಗಿದ್ದು, ಪರೀಕ್ಷೆ ಮುಗಿಸಿ ಹೊರಗೆ ಬರುತ್ತಿದ್ದ ವೇಳೆ ಅಪರಿಚಿತ ಯುವಕರು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಯುವಕರು ವಿದ್ಯಾರ್ಥಿಯನ್ನು ರಕ್ತ ಬರುವ ರೀತಿಯಲ್ಲಿ ಹಿಗ್ಗಾಮುಗ್ಗವಾಗಿ ಥಳಿಸಿರುವುದು ತಿಳಿದುಬಂದಿದೆ.
ಘಟನೆ ವೇಳೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಂತೆ ಆರೋಪಿಗಳು ಬೈಕ್‌ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ವಿವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಲ್ಲೆ ನಡೆಸಿದವರು ಯಾರು ಎಂಬುದು ವಿದ್ಯಾರ್ಥಿಗೂ ತಿಳಿದಿಲ್ಲ ಎಂದು ಹೇಳಲಾಗಿದೆ. ಸದ್ಯ ವಿವಿ ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು



















