ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ (KIOCL Recruitment 2026) ಇರುವ 6 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಲಾಗಿದೆ. 6 ಭೂವಿಜ್ಞಾನಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಒಟ್ಟು ಹುದ್ದೆ: 6
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಮಾರ್ಚ್ 24
3 ಭೂವಿಜ್ಞಾನಿ, 2 ಅಸಿಸ್ಟಂಟ್ ಭೂವಿಜ್ಞಾನಿ ಹಾಗೂ 1 ಜೂನಿಯರ್ ಭೂವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎಸ್ಸಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 65 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅಭ್ಯರ್ಥಿಗಳು ಮೊದಲಿಗೆ kioclltd.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
KIOCL Limited, Corporate office, 2nd Block, Koramangala, Sarjapura Road, Bengaluru-560 034
ಇದನ್ನೂ ಓದಿ : ‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!



















