ದಾವಣಗೆರೆ : ನಗರದಲ್ಲಿ ಸರ್ಕಾರಿ ಮಹಿಳಾ ನೌಕರರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿ, ಕುಣಿದು ಕುಪ್ಪಳಿಸಿದ್ದಾರೆ.

ದಾವಣಗೆರೆಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಮಹಿಳಾ ನೌಕರರು ಉತ್ಸಾಹಭರಿತವಾಗಿ ಭಾಗವಹಿಸಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಹಾಡು, ನೃತ್ಯ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಗಮನ ಸೆಳೆದವು.
ಕಾರ್ಯಕ್ರಮದ ಕೊನೆಯಲ್ಲಿ ಮಾಲಾಶ್ರೀ ಅವರ ಒಳಗೆ ಸೇರಿದರೆ ಗುಂಡು ಎಂಬ ಹಾಡಿಗೆ ಮಹಿಳಾ ನೌಕರರು ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ನೃತ್ಯದ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ ಮಹಿಳೆಯರು, ಪರಸ್ಪರ ಸ್ನೇಹ ಮತ್ತು ಐಕ್ಯತೆಯನ್ನು ಮತ್ತಷ್ಟು ಬಲಪಡಿಸಿಕೊಂಡಿದ್ದಾರೆ. ಈ ಕಾರ್ಯಕ್ರಮ ಮಹಿಳಾ ಸಬಲೀಕರಣ ಮತ್ತು ಅವರ ಪಾತ್ರದ ಮಹತ್ವವನ್ನು ಹೈಲೈಟ್ ಮಾಡಿತು.
ಇದನ್ನೂ ಓದಿ : ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ



















