ಬೆಂಗಳೂರು : ಜೀವವೊಂದನ್ನು ಉಳಿಸುವ ಮೂಲಕ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈಶಾನ್ಯ ವಿಭಾಗದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಮೇಲೆ ವ್ಯಕ್ತಿಯೊಬ್ಬರು ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆ ಎಂಬ ತುರ್ತು ಕರೆ ಪೊಲೀಸ್ ನಿಯಂತ್ರಣ ಕೊಠಡಿಗೆ ಬಂದಿತ್ತು. ಈ ಮಾಹಿತಿಯನ್ನು ಸ್ವೀಕರಿಸಿದ ಕೂಡಲೇ ಗಸ್ತು ವಾಹನದಲ್ಲಿದ್ದ ಶ್ರೀಧರ್ ಮೂರ್ತಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು.
ರೈಲು ಬರುವ ಮುನ್ನವೇ ಹಳಿಯ ಬಳಿಗೆ ತಲುಪಿದ ಶ್ರೀಧರ್ ಮೂರ್ತಿ ವ್ಯಕ್ತಿಯನ್ನು ಸುರಕ್ಷಿತವಾಗಿ ಅಲ್ಲಿಂದ ಪಾರು ಮಾಡಿದ್ದಾರೆ. ಕೇವಲ ರಕ್ಷಣೆ ಮಾಡುವುದಕ್ಕೆ ಸೀಮಿತವಾಗದ ಅವರು, ಆ ವ್ಯಕ್ತಿಯೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಿ, ನಡೆದ ಘಟನೆಯ ಬಗ್ಗೆ ವಿವರಿಸಿ ಸುರಕ್ಷಿತವಾಗಿ ಕುಟುಂಬಸ್ಥರ ಒಪ್ಪಿಸಿದ್ದಾರೆ.
ಇದನ್ನೂ ಓದಿ : ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಕೇಸ್‌ಗೆ ಟ್ವಿಸ್ಟ್!



















