ಧಾರವಾಡ : ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಧಾರವಾಡ ಡಿಸಿ ಕಚೇರಿ ಎದುರು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ವಜಾಗೊಳಿಸುವ ಕ್ರಮವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು.
ಇದನ್ನೂ ಓದಿ : ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸಿ – ಗೃಹ ಸಚಿವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ!



















