ತುಮಕೂರು: ಸಂತೆಮಾವತ್ತೂರು ವಿಎಸ್ಎಸ್ಎನ್ ಅಕ್ರಮ ಚುನಾವಣೆಯ ಆರೋಪ ದಿನೇ ದಿನೇ ತೀವ್ರವಾಗುತ್ತಿದ್ದು, ಕುಣಿಗಲ್ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕುಣಿಗಲ್ ಶಾಸಕ ಡಾ. ರಂಗನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಚುನಾವಣಾ ಅಕ್ರಮ ತಡೆದವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಸಾವಿರಾರು ಸಾರ್ವಜನಿಕರು, ರೈತರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಬಿಜೆಪಿ ಮುಖಂಡ ಡಿ. ಕೃಷ್ಣಕುಮಾರ್ ನೇತೃತ್ವದಲ್ಲಿ ನಡೆದ ರ್ಯಾಲಿ ಪಟ್ಟಣದ ಉಚ್ಚಮಾಸ್ತಿಗೌಡ ವೃತ್ತದಿಂದ ತಾಲೂಕು ಕಚೇರಿ ವರೆಗೆ ಸಾಗಿದೆ.
ಪ್ರತಿಭಟನಾಕಾರರು ಕುಣಿಗಲ್ ತಹಶಿಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!



















