ಉಡುಪಿ | ಇಲ್ಲಿನ ಸಂತೆಕಟ್ಟೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಎರಡು ಕಾರುಗಳು ಹಾಗೂ ಒಂದು ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಒವರ್‌ಟೇಕ್ ಮಾಡಲು ಮುಂದಾದ ವೇಳೆ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್‌ಗೂ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಗಳ ಮುಂಭಾಗಗಳು ಸಂಪೂರ್ಣ ಹಾನಿಗೊಳಗಾಗಿವೆ. ಬಸ್ ಮತ್ತು ಕಾರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!



















