ರಾಮನಗರ : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.
ಅಮೀರ್ (25) ಮೃತ ದುರ್ದೈವಿ. ಗೂಡ್ಸ್ ವಾಹನ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕ್ಯಾಮರೂನ್ ಗ್ರೀನ್ ಮೇಲೆ ಕೋಟಿ ಕೋಟಿ ಸುರಿದ ಕೆಕೆಆರ್.. ಫ್ರಾಂಚೈಸಿಗೆ ನುಂಗಲಾರದ ತುತ್ತಾಗಲಿದೆಯೇ?



















