ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

March 19, 2026
Share on WhatsappShare on FacebookShare on Twitter

ಅಹಮದಾಬಾದ್ : ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಥರಾದ್ ತಾಲ್ಲೂಕಿನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಅಂತರ್ಜಾತಿ ವಿವಾಹವೊಂದು ಈಗ ಭಾರೀ ಹಿಂಸಾಚಾರ, ಉದ್ನಿಗ್ನತೆಗೆ ಕಾರಣವಾಗಿದೆ. ಚೌಧರಿ ಮತ್ತು ರಬಾರಿ ಸಮುದಾಯಗಳ ನಡುವಿನ ಈ ಸಂಘರ್ಷವು ಬುಧವಾರ ವಿಕೋಪಕ್ಕೆ ಹೋಗಿದ್ದು, ಸಾವಿರಾರು ಜನರ ಗುಂಪು ಹಳ್ಳಿಯೊಂದಕ್ಕೆ ಮುತ್ತಿಗೆ ಹಾಕಿ ವಾಹನಗಳನ್ನು ಧ್ವಂಸಗೊಳಿಸಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಬುಧವಾರ ಥರಾದ್‌ನಲ್ಲಿ ಅಂಜನಾ ಚೌಧರಿ ಸಮುದಾಯದ ಮುಖಂಡರು ಬೃಹತ್ ಸಭೆಯನ್ನು ಆಯೋಜಿಸಿದ್ದರು. ಸಭೆಯ ನಂತರ, ಆಕ್ರೋಶಗೊಂಡ ಸಾವಿರಾರು ಜನರ ಗುಂಪು ರಬಾರಿ ಸಮುದಾಯದವರು ಹೆಚ್ಚಿರುವ ‘ಉನ್’ ಗ್ರಾಮದತ್ತ ಮೆರವಣಿಗೆ ನಡೆಸಿತು. ಎರಡು ವರ್ಷಗಳ ಹಿಂದೆ ತಮ್ಮ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ ರಬಾರಿ ಸಮುದಾಯದ ಯುವಕನ ಮನೆಯಿಂದ ಆಕೆಯನ್ನು ಮರಳಿ ಕರೆತರಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿತ್ತು. ಈ ವೇಳೆ ಉದ್ರಿಕ್ತ ಗುಂಪು ಗ್ರಾಮದಲ್ಲಿದ್ದ ವಾಹನಗಳನ್ನು ಜಖಂಗೊಳಿಸಿ, ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು, ಇದರಿಂದಾಗಿ ಹೆದ್ದಾರಿಯಲ್ಲಿ ಸುಮಾರು ಮೂರು ಕಿಲೋಮೀಟರ್‌ಗಳಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು.

ವಿವಾದಕ್ಕೆ ಕಿಚ್ಚು ಹಚ್ಚಿದ ಗಾಯಕಿ ಕಿಂಜಾಲ್ ರಬಾರಿ ಪೋಸ್ಟ್

ಎರಡು ವರ್ಷಗಳ ಹಿಂದೆ ಸುಗಮವಾಗಿ ಮುಗಿದಿದ್ದ ಮದುವೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬರಲು ಪ್ರಸಿದ್ಧ ಗುಜರಾತಿ ಗಾಯಕಿ ಕಿಂಜಾಲ್ ರಬಾರಿ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಕಾರಣ ಎನ್ನಲಾಗಿದೆ. ಕಿಂಜಾಲ್ ಅವರು ಚೌಧರಿ ಸಮುದಾಯದ ಅಶೋಕ್ ಎಂಬವರನ್ನು ಪ್ರೀತಿಸಿ ಮದುವೆಯಾಗಿರುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇದು ಉಭಯ ಸಮುದಾಯಗಳ ನಡುವೆ ಚರ್ಚೆಗೆ ಗ್ರಾಸವಾಯಿತು. ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಿಂಜಾಲ್ ತಮ್ಮ ಪೋಸ್ಟ್ ಡಿಲೀಟ್ ಮಾಡಿ, ಮದುವೆ ರದ್ದುಗೊಳಿಸಿರುವುದಾಗಿ ಮತ್ತು ತಮ್ಮದೇ ಸಮುದಾಯದ ವ್ಯಕ್ತಿಯನ್ನು ಮದುವೆಯಾಗುವುದಾಗಿ ಘೋಷಿಸಿದರು. ಈ ಘಟನೆಯು ಎರಡು ವರ್ಷಗಳ ಹಿಂದೆ ರಬಾರಿ ಸಮುದಾಯದ ಮಹದೇವ್ ಅವರನ್ನು ಮದುವೆಯಾಗಿದ್ದ ಕಂಕು ಚೌಧರಿ ಪ್ರಕರಣವನ್ನು ಮತ್ತೆ ಕೆದಕುವಂತೆ ಮಾಡಿದೆ.

Police Lathicharge after violence in Unn village over Inter-Caste Marriage https://t.co/AOZaURR69h pic.twitter.com/17Pp72I6Z6

— DeshGujarat (@DeshGujarat) March 18, 2026

‘ನನ್ನ ಕುಟುಂಬವನ್ನು ಒಡೆಯಬೇಡಿ’: ವಿವಾಹಿತ ಯುವತಿಯ ಕಣ್ಣೀರಿನ ಮನವಿ

ಸಮುದಾಯದ ಮುಖಂಡರು ತನ್ನನ್ನು ಮರಳಿ ಮನೆಗೆ ಕರೆತರಲು ಒತ್ತಡ ಹೇರುತ್ತಿರುವುದನ್ನು ಕಂಡು ಕಂಕು ಚೌಧರಿ ವಿಡಿಯೋ ಮೂಲಕ ಭಾವನಾತ್ಮಕ ಮನವಿ ಮಾಡಿದ್ದಾರೆ. “ನಾನು 2024ರ ಮಾರ್ಚ್ 31ರಂದು ನನ್ನ ಸ್ವಂತ ಇಚ್ಛೆಯಂತೆ ಮಹದೇವ್ ರಬಾರಿ ಅವರನ್ನು ಮದುವೆಯಾಗಿದ್ದೇನೆ. ನಮಗೀಗ ಒಂದು ವರ್ಷದ ಮಗನಿದ್ದಾನೆ. ನಾವು ಸುಖವಾಗಿದ್ದೇವೆ. ದಯವಿಟ್ಟು ನನ್ನನ್ನು ನನ್ನ ಪತಿ ಮತ್ತು ಮಗುವಿನಿಂದ ಬೇರ್ಪಡಿಸಬೇಡಿ. ನಿಮ್ಮ ನಿರ್ಧಾರಗಳು ನನ್ನ ಸಂಸಾರವನ್ನು ಬೀದಿಗೆ ತರದಿರಲಿ” ಎಂದು ಅವರು ಕೈಮುಗಿದು ಕೇಳಿಕೊಂಡಿದ್ದಾರೆ.

ಐದು ದಿನಗಳ ಗಡುವು ನೀಡಿದ ಸಮುದಾಯದ ಮುಖಂಡರು

ಚೌಧರಿ ಸಮುದಾಯದ ಅಧ್ಯಕ್ಷ ರಜನೀಶ್ ಚೌಧರಿ ಅವರು ಈ ಪ್ರಕರಣವನ್ನು ‘ಸಮುದಾಯದ ಗೌರವದ ಪ್ರಶ್ನೆ’ ಎಂದು ಬಣ್ಣಿಸಿದ್ದಾರೆ. ರಬಾರಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿ, ಮುಂದಿನ ಐದು ದಿನಗಳಲ್ಲಿ ಯುವತಿಯನ್ನು ಮರಳಿ ಕರೆತರುವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದಾರೆ. ಒಂದು ವೇಳೆ ನಿಗದಿತ ಸಮಯದೊಳಗೆ ಯುವತಿ ಮರಳದಿದ್ದರೆ ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಸದ್ಯ ಉಭಯ ಗ್ರಾಮಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಇದನ್ನೂ ಓದಿ : ಡಿವೈಡರ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ.. ಓರ್ವ ಸ್ಥಳದಲ್ಲೇ ಸಾವು!

Tags: IndiaKarnataka News beat
SendShareTweet
Previous Post

ಡಿವೈಡರ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ.. ಓರ್ವ ಸ್ಥಳದಲ್ಲೇ ಸಾವು!

Next Post

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

Related Posts

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?
ದೇಶ

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ
ದೇಶ

66.2 ಲಕ್ಷ ಹಳೆಯ ವಾಹನಗಳ ನೋಂದಣಿ ರದ್ದು.. ಮಾಲಿನ್ಯ ತಡೆಗೆ NGT ಕಟ್ಟುನಿಟ್ಟಿನ ಕ್ರಮ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’
ದೇಶ

ಗ್ಯಾಸ್ ಸಿಲಿಂಡರ್ ಪಡೆಯಲು ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ.. ಬಂದಿದೆ ದೇಶದ ಮೊದಲ ‘LPG ATM’

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!
ದೇಶ

‘ಕೈ’ ಜಾರಲಿದೆಯೇ ಐತಿಹಾಸಿಕ ಅಕ್ಬರ್ ರಸ್ತೆಯ ಕಚೇರಿ? ಖಾಲಿ ಮಾಡಲು ಕಾಂಗ್ರೆಸ್‌ಗೆ ಸರ್ಕಾರ ಗಡುವು!

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?
ದೇಶ

ತಮಿಳುನಾಡು ಚುನಾವಣೆ – AIADMK ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌, ಎಡಪ್ಪಾಡಿಯಲ್ಲಿ EPS ಕಣಕ್ಕೆ?

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು
ದೇಶ

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

Next Post
ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

‘ಕಮಲ’ ಹಿಡಿಯಲು ಸಜ್ಜಾದ್ರಾ ಟೆನಿಸ್ ತಾರೆ ಲಿಯಾಂಡರ್ ಪೇಸ್?

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

ಟೊಮೆಟೊ ಬೆಲೆ ದಿಢೀರ್‌ ಕುಸಿತ.. ರೈತರು ಕಂಗಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಅಸಲಿ ಕಹಾನಿ ಬಯಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat