ಬೆಂಗಳೂರು : ಮನೆಯೊಂದರಲ್ಲಿ ನಿಗೂಢ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ನಲಮಂಗಲ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಚಂದನ ಹೊಸಹಳ್ಳಿ ಗ್ರಾಮದ ಬಳಿ ಇರುವ ಬಿಲ್ಡಿಂಗ್‌ನ ನಾಲ್ಕನೇ ಮಹಡಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದೆ.
ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಹಾಗೂ ರಾಮ್ ಭಚನ್ ಶರ್ಮಾ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕರು. ಈ ಮೂವರು ಉತ್ತರ ಪ್ರದೇಶ ಮೂಲದ ಕಾರ್ಮಿಕರಾಗಿದ್ದು, ಮೂವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೆಲ್ನೋಟಕ್ಕೆ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!



















