ಬೆಂಗಳೂರು : ನೀವು ದಾವಣಗೆರೆ ಜಿಲ್ಲೆಯವರಾಗಿದ್ದು, ನಿಮ್ಮದೇ ಜಿಲ್ಲೆಯಲ್ಲಿ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶ ದೊರೆತಿದೆ. ಹೌದು, ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಾಲ್ಕು ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿಗಾಗಿ (DC Office Davangere Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ
ಒಟ್ಟು ಹುದ್ದೆಗಳು: 4
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 10
ಉದ್ಯೋಗ ಸ್ಥಳ: ದಾವಣಗೆರೆ
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ davanageredudc.mrc.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 27 ಸಾವಿರ ರೂಪಾಯಿಯಿಂದ 46,675 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Chairman, Municipal Workers Direct Recruitment (Special) Selection Authority and the Deputy Commissioner, Davangere.
ಇದನ್ನೂ ಓದಿ : ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ



















