ಬೆಂಗಳೂರು | ನಗರದ ಕನಕಪುರ ರಸ್ತೆಯ ಕೊಣಕುಂಟೆ ಕ್ರಾಸ್ ಬಳಿ ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾರು ಸಂಚರಿಸುತ್ತಿದ್ದಾಗಲೇ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಕೆಎ01 MC 4049 ಸಂಖ್ಯೆಯ ವರ್ನಾ ಕಾರು ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ಚಾಲಕ, ಕಾರನ್ನು ತಕ್ಷಣ ರಸ್ತೆ ಬದಿಗೆ ನಿಲ್ಲಿಸಿ ಹೊರಬಂದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಉದ್ಯೋಗಿಗಳ ಪಿಂಚಣಿ ಏರಿಕೆಗೆ ಸಂಸದೀಯ ಸಮಿತಿ ಶಿಫಾರಸು.. ಎಷ್ಟಾಗಲಿದೆ?


















