ರಾಯಚೂರು : ರಾಯಚೂರಿನ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ದೇವೇಂದ್ರಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವೇಂದ್ರಪ್ಪ ಅವರು ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು ಮಠ ಕಟ್ಟಿದ್ದರು.
ಇದೀಗ ಬಸ್ಸಾಪುರ ಮಠದ ಭಜನಾ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ ; ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು.. ತಪ್ಪಿದ ಅನಾಹುತ!



















